ಮಂಗಳೂರು: ಕುಡ್ಲದ ಬೆಡಗಿ ಯಶಸ್ಸಿನಿ ದೇವಾಡಿಗ ಮುಡಿಗೆ ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್ ಕಿರೀಟ ಏರಿದೆ. ಬ್ಯಾಂಕಾಕಿನಲ್ಲಿ ನಡೆದ ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್ ೨೦೨೩ರ ಅಂತಿಮ ಸುತ್ತಿನಲ್ಲಿ ಪ್ರಥಮ ಸ್ಥಾನವನ್ನು ಪಡೆದುದಿದ್ದಾರೆ.
ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್‌ನ್ಯಾಶನಲ್ ೨೦೨೩ ಹದಿಹರೆಯದವರಿಗೆ ನಡೆಯುವ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಾಗಿದೆ. ಥಾಯ್ಲೆಂಡ್‌ನಲ್ಲಿ ನಡೆದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದ ಯಶಸ್ವಿನಿ ದೇವಾಡಿಗ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ ಕಿರೀಟ ಮುಡಿಗೇರಿಸಿಕೊಂಡರು. ಇವರು ದೇವದಾಸ್ ದೇವಾಡಿಗ ಕುಳಾಯಿ ಹಾಗೂ ಮೀನಾಕ್ಷಿ ದೇವಾಡಿಗ ಅವರ ಸುಪುತ್ರಿಯಾಗಿದ್ದು, ಪ್ರಸ್ತುತ ಸುರತ್ಕಲ್‌ನ ಗೋವಿಂದ ದಾಸ್ ಪಿಯು ಕಾಲೇಜಿನಲ್ಲಿ ದ್ವಿತೀಯಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.