ಯಶಸ್ವೀ ಕಾರ್ಯಾಚರಣೆ: ಮೀನುಗಾರರ ರಕ್ಷಣೆ

ಮಂಗಳೂರು: ಸಮುದ್ರದಲ್ಲಿ ಸಿಲುಕಿದ ಮೀನುಗಾರಿಕಾ ಬೋಟನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. ಮಂಗಳೂರು ಹಳೆ ಬಂದರು ಧಕ್ಕೆಯಿಂದ ೩೯ ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಇಂಜಿನಿನ ತಾಂತ್ರಿಕ ತೊಂದರೆಗೆ ಸಿಲುಕಿದ್ದ ಮೀನುಗಾರಿಕಾ ಬೋಟ್ ಮತ್ತು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಯಶಸ್ವೀ ಕಾರ್ಯಾಚರಣೆಯೊಂದಿಗೆ ರಕ್ಷಿಸಿ ಕರೆತಂದಿದೆ.

ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರಲ್ಲಿ ತಾಂತ್ರಿಕ ಅಡಚಣೆಗೆ ತುತ್ತಾಗಿ ಸಿಲುಕಿತ್ತು. ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು. ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್ಗಾರ್ಡ್ಗೆ ಮಾಹಿತಿ ನೀಡಿದ್ದರು. ಅದರಂತೆ ಕೋಸ್ಟ್ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ಬುಧವಾರ ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ.

Share

Leave a Reply

Your email address will not be published. Required fields are marked *