ಸುಬ್ರಹ್ಮಣ್ಯ/ಧರ್ಮಸ್ಥಳ: ಸರಣಿ ರಜೆ ಹಾಗೂ ವಾರಾಂತ್ಯದಲ್ಲಿ ಧಾರ್ಮಿಕ ಕ್ಷೇತ್ರ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದವು. ಶನಿವಾರ ಸಂಜೆಯಿ0ದ ಕ್ಷೇತ್ರಗಳಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತ ಚಾರಣಕ್ಕೂ ವಾರಾಂತ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಚಾರಣಿಗರು ಆಗಮಿಸಿದ್ದರು. ಆದರೆ ಮಳೆಯ ತೀವ್ರತೆಯಿಂದಾಗಿ ಚಾರಣಕ್ಕೆ ತೊಡಕಾಯಿತು. ಮಂಗಳವಾರದಿ0ದ ಚಾರಣಿಗರಿಗೆ ಚಾರಣಕ್ಕೆ ಅವಕಾಶ ಇಲ್ಲ ಎಂದು ಅರಣ್ಯ ಇಲಾಖೆ ತಿಳಿಸಿದೆ. ದೇವಸ್ಥಾನಗಳಿಗೆ ರಾಜ್ಯದ ವಿವಿಧ ಭಾಗಗಳಿಂದ ಯಾತ್ರಾರ್ಥಿಗಳು ಆಗಮಿಸುತ್ತಿದ್ದುದು ಕಂಡು ಬಂತು.
ವಾರಾಂತ್ಯ ಹಾಗೂ ಸರಣಿ ರಜೆಯಿಂದಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಭಾನುವಾರ ದೊಡ್ಡ ಸಂಖ್ಯೆಯಲ್ಲಿ ಭಕ್ತರಾಗಮಿಸಿದ್ದರು.