ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಯಡಪಡಿತ್ತಾಯ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿ ವಿಧಾನಗಳೊಂದಿಗೆ ಶುಕ್ರವಾರ ನೆರವೇರಿತು.
ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃಮತ ಮಹಾಭಿಷೇಕವನ್ನು ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಯಡಪಡಿತ್ತಾಯರು ನೆರವೇರಿಸಿದರು.ಶ್ರೀ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರು ಕದಿರು ಪೂಜೆ ನೆರವೇರಿಸಿ ಶ್ರೀ ದೇವಳದ ಗರ್ಭಗುಡಿಗೆ ಕದಿರು ಕಟ್ಟಿದರು. ಹೊಸ್ತಾರೋಗಣೆಯ ಪ್ರಯುಕ್ತ ಶ್ರೀ ದೇವರಿಗೆ ಗರ್ಭಗುಡಿಯ ಎದುರಿನ ಮಂಟಪದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.