ಮೂಡುಬಿದಿರೆ ಹೋಬಳಿ ಕ.ಸಾ.ಪ. ಅಧ್ಯಕ್ಷರಾಗಿ ಡಾ.ರಾಮಕೃಷ್ಣ ಶಿರೂರು ಆಯ್ಕೆ
ಮೂಡುಬಿದಿರೆ: ಹೋಲಿ ರೋಸರಿ ಪ್ರೌಢಶಾಲೆಯ ಡಾ. ರಾಮಕೃಷ್ಣ ಶಿರೂರು ಇವರನ್ನು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.