ಮೂಡುಬಿದಿರೆ: ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನಕ್ಕೆ ಮೂಡುಬಿದಿರೆಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ಅವರ ಅಪಾರ ಸೇವೆ ಸ್ಮರಣೀಯ, ಭಗವಂತ ಇವರ ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿಯನ್ನು ಕರುಣಿಸಲಿ ಹಾಗೂ ಸರ್ವಶಕ್ತನು ಅಗಲಿದ ದಿವ್ಯಾತ್ಮಕ್ಕೆ ಸದ್ಗತಯನ್ನು ಕರುಣಿಸಲಿ ಎಂದು ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ಉದ್ಯಮಿ ಶ್ರೀಪತಿ ಭಟ್, ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮೂಡುಬಿದಿರೆ, ಈದಿನ ಸುದ್ದಿ ಮಾಧ್ಯಮ ತೀವ್ರ ಸಂತಾಪ ವ್ಯಕ್ತಪಡಿಸಿದೆ.