ಎಕ್ಸಲೆಂಟ್ ಎಜುಕೇಶನ್ ಫೌಂಡೇಶನ್ ಮೂಡುಬಿದಿರೆ: ೧ ಕೋಟಿ ರೂ ವಿದ್ಯಾರ್ಥಿವೇತನ

ಮೂಡುಬಿದಿರೆ: ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುತ್ತಿರುವ ಮೂಡುಬಿದಿರೆಯ ಕಲ್ಲಬೆಟ್ಟುವಿನ ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾಸಂಸ್ಥೆ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆಯುವ ಆರ್ಥಿಕವಾಗಿ ಹಿಂದುಳಿದಿರುವ, ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸುಮಾರು ೧ ಕೋಟಿ ರೂ ವಿದ್ಯಾರ್ಥಿ ವೇತನವನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಘೋಷಿಸಿದ್ದಾರೆ.

ಕಲ್ಲಬೆಟ್ಟು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಲು ಉದ್ದೇಶಿಸಿರುವ ಬಡ ಹಾಗೂ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡುವ ಉದ್ದೇಶದಿಂದ ೧೦ನೇ ತರಗತಿಯಲ್ಲ್ಲಿ ೯೮% ಹಾಗೂ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಗೆ ವಿದ್ಯಾರ್ಥಿವೇತನದ ಮೂಲಕ ಶಿಕ್ಷಣ ನೀಡಲು ಸಂಸ್ಥೆ ತೀರ್ಮಾನಿಸಿದೆ ಈ ಅವಕಾಶವನ್ನು ಪ್ರತಿಭಾವಂತ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದು.

ಯುವರಾಜ್ ಜೈನ್
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್

ಸಂಸ್ಥೆಯು ಪಿಯುಸಿ ಶಿಕ್ಷಣದ ಜೊತೆಗೆ ಮೆಡಿಕಲ್ ಹಾಗೂ ಉನ್ನತ ತಾಂತ್ರಿಕ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ನೀಟ್/ಜೆಇಇ/ಸಿಇಟಿ/ಸಿಎ ಮುಂತಾದ ತರಭೇತಿಯನ್ನು ಕೊಡಲು ಅತ್ಯುನ್ನತ ತರಬೇತಿ ಕೌಶಲ್ಯವನ್ನು ಪಡೆದಿರುವ ಅಧ್ಯಾಪಕ ವೃಂದವನ್ನು ಹೊಂದಿರುತ್ತದೆ. ಈ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿ ಯು ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ೨೦ ರಾಜ್ಯಮಟ್ಟದ ರ‍್ಯಾಂಕ್‌ಗಳಲ್ಲಿ ೧೫ ರ‍್ಯಾಂಕ್‌ಗಳನ್ನು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಪಡೆದು ಅದ್ವಿತೀಯ ಸಾಧನೆಯನ್ನು ಮಾಡಿರುತ್ತಾರೆ. ಪ್ರತೀ ವರ್ಷವೂ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಾದAIIMS, JIPMER, BOMBAY IIT, CHENAI IIT, BMC, MMC ಸೇರುತ್ತಿರುವುದು ಸಂಸ್ಥೆಯು ನೀಡುತ್ತಿರುವ ಅತ್ಯುತ್ತಮ ತರಬೇತಿ ವ್ಯವಸ್ಥೆಗೆ ಅತ್ಯುನ್ನತ ನಿದರ್ಶನವಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಬೋರ್ಡ್, ಐಸಿಎಸ್‌ಐ ಮತ್ತು ಸಿಬಿಎಸ್‌ಇ ನಡೆಸುವ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ ೯೮ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳು ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿವೇತನದ ಮೂಲಕ ಶಿಕ್ಷಣ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೂಡಬಿದ್ರೆ ಕಲ್ಲಬೆಟ್ಟುವಿನ ಸಂಸ್ಥೆಯ ಆಡಳಿತ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a Reply

Your email address will not be published. Required fields are marked *