ಎಸ್‌ಎಸ್‌ಎಲ್ ಸಿ : ಎಕ್ಸಲೆಂಟ್‌ನ ಆದಿತ್ಯ ರಾಜ್ಯಕ್ಕೆ ೬ನೇ ರ‍್ಯಾಂಕ್
ಮೂಡುಬಿದಿರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿ ಆದಿತ್ಯ ಆರ್ ಪುನಿಚಿತ್ತಾಯ ರಾಜ್ಯಕ್ಕೆ ಆರನೇ ರ‍್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾನೆ.
೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ ಹೊರಬಂದಿದ್ದು, ೬೨೦ ಅಂಕ ಪಡೆಯುವ ಮೂಲಕ ಆದಿತ್ಯ ದೊಡ್ಡ ಸಾಧನೆ ಮಾಡಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ಅಭಿನಂದಿಸಿದ್ದಾರೆ.