ಮೂಡುಬಿದಿರೆ ಕಾಳಿಕಾಂಬಾ ಮಹಿಳಾ ಸಮಿತಿ ರಜತ ಸಂಭ್ರಮ

ನ.೧೬ ಅವಿಭಜಿತ ದ.ಕ ಜಿಲ್ಲಾಮಟ್ಟದ ವಿಶ್ವಕರ್ಮ ಮಹಿಳಾ ಸಮಾವೇಶ – ಸಾಮೂಹಿಕ ದುರ್ಗಾ ಪೂಜೆ

ಮೂಡುಬಿದಿರೆ : ಇಲ್ಲಿನ ಕಾಳಿಕಾಂಬಾ ಮಹಿಳಾ ಸಮಿತಿಯ ರಜತ ಸಂಭ್ರಮದoಗವಾಗಿ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ನ.೧೬ರಂದು ಸಾಮೂಹಿಕ ದುರ್ಗಾ ಪೂಜೆ ಹಾಗೂ ಅವಿಭಜಿತ ದ.ಕ ಜಿಲ್ಲಾ ಮಟ್ಟದ ವಿಶ್ವಕರ್ಮ ಮಹಿಳಾ ಸಮಾವೇಶ ನಡೆಯಲಿದೆ ಎಂದು ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶಾಂತಲಾ ಸೀತಾರಾಮ ಆಚಾರ್ಯ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ೩೦ ಮಂದಿ ಅರ್ಹ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ ನಡೆಯಲಿದೆ. ಅವಿಭಜಿತ ದ. ಕ ಜಿಲ್ಲಾ ಮಟ್ಟದಲ್ಲಿ ವಿಶ್ವಕರ್ಮ ಮಹಿಳೆಯರಿಗಾಗಿ ನಡೆಸಿದ ಸಾಂಸ್ಕೃತಿಕ ಹಾಗೂ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಹಾಗೂ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡ ತಂಡಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಸಮಿತಿಯ ಮಾಜಿ ಅಧ್ಯಕ್ಷರುಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಗುವುದು ಎಂದರು.

ನ. ೧೬ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯುವ ಮಹಿಳಾ ಸಮಾವೇಶದಲ್ಲಿ ಆನೆಗುಂದಿ ಸಂಸ್ಥಾನ ಸರಸ್ವತೀ ಪೀಠದ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಮತ್ತು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.
ಸರಸ್ವತಿ ಮಾತೃ ಮಂಡಳಿಯ ಗೌರವಾಧ್ಯಕ್ಷೆ ಸರಳಮ್ಮ ಗುರುನಾಥ ಸ್ವಾಮೀಜಿ ಶುಭಾಶಂಸನೆ ಹಾಗೂ ಹೊಲಿಗೆ ಯಂತ್ರಗಳನ್ನು ವಿತರಿಸಲಿದ್ದಾರೆ. ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶಾಂತಲಾ ಸೀತಾರಾಮ ಆಚಾರ್ಯ ಬೆಳುವಾಯಿ ಅಧ್ಯಕ್ಷತೆ ವಹಿಸಲಿದ್ದು ರಾಜ್ಯ ಶಿಕ್ಷಾ ಫೌಂಡೇಶನ್‌ನ ನಿರ್ದೇಶಕಿ ಅನಿತಾ ಲಕ್ಷ್ಮಿಆಚಾರ್ಯ ದಿಕ್ಸೂಚಿ ಭಾಷಣಗೈಯಲಿದ್ದಾರೆ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಕೆ ಬಾಲಕೃಷ್ಣ ಆಚಾರ್ಯ ಉಳಿಯ, ಮಾಜಿ ಮೊಕ್ತೇಸರರಾದ ಡಾ. ಜಿ. ರಾಮಕೃಷ್ಣ ಆಚಾರ್ಯ, ಸುಂದರ ಆಚಾರ್ಯ ಬೆಳುವಾಯಿ, ಜಯಕರ ಎನ್. ಆಚಾರ್ಯ ಲಾಡಿ, ಸರಸ್ವತಿ ಮಾತೃ ಮಂಡಳಿಯ ಅಧ್ಯಕ್ಷೆ ಸಂಧ್ಯಾ ಲಕ್ಷö್ಮಣ ಆಚಾರ್ಯ, ರೂವಾರಿ ಡಿಜಿಟಲ್ ಪತ್ರಿಕೆಯ ಸಂಪಾದಕಿ ರತ್ನಾವತಿ ಜೆ. ಬೈಕಾಡಿ ಭಾಗವಹಿಸಲಿದ್ದಾರೆ. ಕ್ಷೇತ್ರದ ಮೊಕ್ತೇಸರರಾದ ಶಿವರಾಮ ಆಚಾರ್ಯ, ಯೋಗೀಶ ಆಚಾರ್ಯ ಹಾಗೂ ಕಾಳಿಕಾಂಬಾ ಸೇವಾ ಸಮಿತಿಯ ಅಧ್ಯಕ್ಷ ಶ್ರೀನಾಥ್ ಆಚಾರ್ಯ ಉಪಸ್ಥಿತರಿರುವರು ಎಂದರು.

ವಿಡಿಯೋ ನ್ಯೂಸ್ ಗಾಗಿ ಈ ಕೊಂಡಿ ಬಳಸಿ

https://surl.li/ihgojf

ಅವಿಭಜಿತ ದ.ಕ ಜಿಲ್ಲೆಯ ಕಾಳಿಕಾಂಬಾ ದೇವಾಲಯಗಳ ಅಧೀನದಲ್ಲಿರುವ ೧೪ ಮಹಿಳಾ ಮಂಡಳಿಗಳ ಅಧ್ಯಕ್ಷರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಎಂ. ಕೆ ಬಾಲಕೃಷ್ಣ ಆಚಾರ್ಯ, ಮಹಿಳಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಅರವಿಂದ ಆಚಾರ್ಯ, ಕೋಶಾಧಿಕಾರಿ ವಿದ್ಯಾ ಸುರೇಶ್ ಆಚಾರ್ಯ, ಮಾಜಿ ಅಧ್ಯಕ್ಷೆ ಗೀತಾ ಯೋಗೀಶ್ ಆಚಾರ್ಯ, ಆನೆಗುಂದಿ ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ಆಚಾರ್ಯ ಉಪಸ್ಥಿತರಿದ್ದರು.

 

Share

Leave a Reply

Your email address will not be published. Required fields are marked *