ಮೂಡುಬಿದಿರೆಗೆ ಶಿವಣ್ಣ, ಗೀತ

ಮೂಡುಬಿದಿರೆ: ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಶನಿವಾರ ಮೂಡುಬಿದಿರೆಯ ಆಳ್ವಾಸ್ ಕಾಲೇಜಿಗೆ ಆಗಮಿಸಲಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಆಯೋಜಿಸಲಾಗುವ ಆಳ್ವಾಸ್ ಸಂಪ್ರದಾಯ ದಿನ ಶನಿವಾರ ಬೆಳಿಗ್ಗೆ ೯.೧೫ ಕ್ಕೆ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಜರಗಲಿದೆ. ಈ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷರು ಡಾ. ಮೋಹನ್ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share

Leave a Reply

Your email address will not be published. Required fields are marked *