ಬೆಂಗಳೂರು: ಜೂನ್ 14ರಂದು 7ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಬೆಂಗಳೂರು: ವಿಶ್ವ ಹಿಂದೂ ಪರಿಷದ್ (ಯಲಹಂಕ ಜಿಲ್ಲೆ), ಶ್ರೀ ಸಾಯಿ ಸಮರ್ಥ್ ಫೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಹಯೋಗದಲ್ಲಿ 7ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜೂನ್ 14ರಂದು ಆಯೋಜಿಸಲಾಗಿದೆ.

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಬಡ ಮಕ್ಕಳಿಗೆ ನಿಯಮಿತವಾಗಿ ರಕ್ತದ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ರಕ್ತದಾನಿಗಳಿಂದ ಸಂಗ್ರಹವಾಗುವ ರಕ್ತವನ್ನು ಬಡ ಥಲಸ್ಸೆಮಿಯಾ ರೋಗಿಗಳಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಒಂದು ಬಾರಿ ಸಂಪೂರ್ಣ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಮನವಿ ಮಾಡಲಾಗಿದೆ.

ಶಿಬಿರವು ಜೂನ್ 14, 2026ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಯಲಹಂಕ ನ್ಯೂ ಟೌನ್‌ನ BMTC ಬಸ್ ನಿಲ್ದಾಣದ ಸಮೀಪದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 9986079194 ಸಂಖ್ಯೆಯನ್ನು ಸಂಪರ್ಕಿಸಬಹುದು.

Share

Leave a Reply

Your email address will not be published. Required fields are marked *