KMF VIMUL Recruitment 2023: ಕೆಎಂಎಫ್ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF Vijayapura & Bagalkot District Co-operative Milk Producers Societies Union Ltd) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಜೂನಿಯರ್ ಟೆಕ್ನಿಷಿಯನ್, ಎಕ್ಸ್‌ಟೆನ್ಶನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 25, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.