ಚುನಾವಣೆ 2023

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yediyurappa) ಅವರಿಗೆ ಬಿಜೆಪಿ ಹೈಕಮಾಂಡ್ (BJP High Command) ಬಿಗ್ ಟಾಸ್ಕ್ ನೀಡಿದೆ ಎಂದು ತಿಳಿದು ಬಂದಿದೆ. ಈ ಸಂದೇಶ ಯಡಿಯೂರಪ್ಪ ಅವರಿಗೆ ತಲುಪಿದ್ದು, ಆ ಇಬ್ಬರು ಘಟಾನುಘಟಿ ನಾಯಕರ ವಿರುದ್ಧ ಮಾಜಿ ಸಿಎಂ ಪ್ರಚಾರ ನಡೆಸಲಿದ್ದಾರೆ. ಈ ಬಾರಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Former DCM Laxman Savadi) ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಶೆಟ್ಟರ್ ಮತ್ತು ಸವದಿ ಲಿಂಗಾಯತ ಮುಖಂಡರಾಗಿದ್ದರಿಂದ (Lingayat Leaders) ಇಬ್ಬರನ್ನು ಸೋಲಿಸುವ ಜವಾಬ್ದಾರಿಯನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಬಿಎಸ್​ವೈ ನಿವಾಸಕ್ಕೆ ಬಿಎಲ್​ ಸಂತೋಷ್ ಭೇಟಿ

ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಭೇಟಿಯಾಗಿ ಚುನಾವಣೆ ಸಂಬಂಧ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದರು. ವರುಣಾ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್, ಅಥಣಿಯಲ್ಲಿ ಹೆಚ್ಚು ಪ್ರಚಾರದ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಹಕರಿಸಬೇಕೆಂದು ಬಿಎಲ್ ಸಂತೋಷ್ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Share

Leave a Reply

Your email address will not be published. Required fields are marked *