Operation Kaveri: ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

INS ಸುಮೇಧಾ 278 ಜನರೊಂದಿಗೆ ಪೋರ್ಟ್ ಸುಡಾನ್‌ನಿಂದ ಜೆದ್ದಾಗೆ ಹೊರಟಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
Operation Kaveri: ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭಸುಡಾನ್​​ನಿಂದ ಜೆದ್ದಾಗೆ ಹೊರಟ ಭಾರತೀಯರು
ಸುಡಾನ್​​ನಲ್ಲಿ (Sudan) ಸಿಲುಕಿರುವ ಭಾರತೀಯರ ಸ್ಥಳಾಂತರ (evacuations) ಆರಂಭವಾಗಿದೆ. ಆಪರೇಷನ್ ಕಾವೇರಿ (Operation Kaveri) ಅಡಿಯಲ್ಲಿ ಭಾರತೀಯರ ಮೊದಲ ಬ್ಯಾಚ್ ಸುಡಾನ್‌ನಿಂದ ಹೊರಡಲಿದೆ. INS ಸುಮೇಧಾ 278 ಜನರೊಂದಿಗೆ ಪೋರ್ಟ್ ಸುಡಾನ್‌ನಿಂದ ಜೆದ್ದಾಗೆ ಹೊರಟಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಸೇನೆ ಮತ್ತು ಅರೆಸೇನಾ ಪಡೆಗಳ ಮಧ್ಯೆ ಸಂಘರ್ಷ ನಡೆಯುತ್ತಿರುವ ಸುಡಾನ್​ನಲ್ಲಿ ಕನ್ನಡಿಗರೂ ಸೇರಿದಂತೆ ನೂರಾರು ಮಂದಿ ಭಾರತೀಯರು ಸಿಲುಕಿದ್ದಾರೆ. ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ‘ಆಪರೇಷನ್ ಕಾವೇರಿ’ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸುಮಾರು 500 ಭಾರತೀಯರು ಸುಡಾನ್ ಬಂದರನ್ನು ತಲುಪಿದ್ದಾರೆ. ಅವರನ್ನು ಕರೆತರಲು ನಮ್ಮ ಹಡಗುಗಳು ಮತ್ತು ವಿಮಾನಗಳು ಸಜ್ಜಾಗಿವೆ. ಸುಡಾನ್‌ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದರು

ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಸೌದಿ ಅರೇಬಿಯಾಕ್ಕೆ ಎರಡು ಹೆವಿ-ಲಿಫ್ಟ್ ವಿಮಾನಗಳನ್ನು ಮತ್ತು ಸುಡಾನ್ ಕರಾವಳಿಗೆ ಹಡಗನ್ನು ಕಳುಹಿಸಲಾಗಿದೆ ಎಂದು ಏಪ್ರಿಲ್ 23ರಂದು ವಿದೇಶಾಂಗ ಸಚಿವಾಲಯ ತಿಳಿಸಿತ್ತು.

First batch of stranded Indians leave Sudan under Operation Kaveri, INS Sumedha with 278 people onboard departs Port Sudan for Jeddah: MEA spox

Share

One thought on “Operation Kaveri: ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

Leave a Reply

Your email address will not be published. Required fields are marked *