ಬಿಜೆಪಿ ಪ್ಲಾನ್ಗೆ ಒಗ್ಗಟ್ಟಿನ ಶಕ್ತಿ ಪ್ರದರ್ಶನದ ಮೂಲಕ ದೇವೇಗೌಡರ ಕೌಂಟರ್ ಪ್ಲಾನ್. ಇಂದಿನಿಂದ (ಏ.25) ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಹಳೇ ಮೈಸೂರು ಮೇಲೆ ಬಿಜೆಪಿ ಕಣ್ಣು: ಪ್ರಚಾರದ ಕಣಕ್ಕಿಳಿದ ದೇವೇಗೌಡ, ಕುಮಾರಸ್ವಾಮಿ; ಅಪ್ಪ-ಮಗನ ಒಗ್ಗಟ್ಟಿನ ಶಕ್ತಿ ಪ್ರದರ್ಶನಹೆಚ್.ಡಿ ಕುಮಾರಸ್ವಾಮಿ, ಹೆಚ್ ಡಿ ದೇವೇಗೌಡ
ಮೈಸೂರು: ಈ ಬಾರಿ ಬಿಜೆಪಿ (BJP) ಹಳೇ ಮೈಸೂರಿನಲ್ಲಿ (Old Mysore) ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ನಿರ್ಧರಿಸಿದ್ದು, “ಮಿಷನ್ ಹಳೇ ಮೈಸೂರು” ಎಂಬ ಯೋಜನೆ ರೂಪಿಸಿದೆ. ಈ ಮೂಲಕ ಜೆಡಿಎಸ್ನ (JDS) ಭದ್ರಕೋಟೆಯಾಗಿರುವ ಹಳೇ ಮೈಸೂರಿನ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಈಗಾಗಲೇ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದು ಜೆಡಿಎಸ್ ಅನ್ನು ವಿಚಲಿತಗೊಳಿಸಿದೆ. ಹೀಗಾಗಿ ಪ್ರಚಾರದ ಕಣಕ್ಕೆ ಸ್ವತಃ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು (HD Devegowda) ಇಳಿದಿದ್ದು, ಕಮಲ ಅರಳದಂತೆ ಕಸರತ್ತು ನಡೆಸಿದ್ದಾರೆ. ಹಳೆ ಮೈಸೂರು ಭಾಗದ ಕ್ಷೇತ್ರಗಳಲ್ಲಿ ತಂದೆ ಹೆಚ್ ಡಿ ದೇವೇಗೌಡ ಮತ್ತು ಮಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumarswamy) ಇಬ್ಬರೂ ಪ್ರತ್ಯೇಕ ಪ್ರಚಾರ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ.
ಈ ಸಂಬಂಧ ತಳಮಟ್ಟದ ಕಾರ್ಯಕರ್ತರು ಮತ್ತು ಮುಖಂಡರ ಜೊತೆ ನಿರಂತರ ಸಭೆ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಮತ್ತೆ ಜೆಡಿಎಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಯೋಜನೆ ರೂಪಿಸುತ್ತಿದ್ದಾರೆ. ಹೀಗಾಗಿ ಇಂದಿನಿಂದ (ಏ.25) ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.