ಮಂಗಳೂರು: ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಬೆಂದೂರ್ ಹಾಗೂ ಕಂಟೋನ್ಮೆಂಟ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ಭರ್ಜರಿ ಮತಯಾಚನೆ ನಡೆಸಿದರು.

“ಕ್ಷೇತ್ರದ ಜನರ ಆಶೋತ್ತರಗಳನ್ನು ಈಡೇರಿಸಿ ಅವರು ಬಯಸಿದ್ದ ಆಡಳಿತ ನೀಡಿದ ತೃಪ್ತಿ ನಮಗಿದೆ. ಎಲ್ಲಾ ವರ್ಗದ ಜನರು ನೆಮ್ಮದಿಯಿಂದ ಜೀವನ ನಡೆಸುವಂತಹ ವಾತಾವರಣ ನಿರ್ಮಿಸುವುದು ಭಾರತೀಯ ಜನತಾ ಪಾರ್ಟಿಯ ಪ್ರಥಮ ಆದ್ಯತೆಯಾಗಿದೆ. ಹಾಗಾಗಿ ನಮ್ಮ ಸರ್ಕಾರವನ್ನು ಬೆಂಬಲಿಸಿ” ಎಂದು ವೇದವ್ಯಾಸ ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.