ಬೆಂಗಳೂರು: ರಾಜಧಾನಿಯಲ್ಲಿ ಮುಂಜಾನೆಯಿಂದ ಮಳೆಯ ಸಿಂಚನವಾಗಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು, ಕೂಲ್ ಕೂಲ್ ವೆದರ್‌ಗೆ ಜನತೆ ಫುಲ್ ಖುಷಿಯಾಗಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಧ್ಯಾಹ್ನ 3ಗಂಟೆಯ ನಂತರ ಬಹುಭಾಗಗಳಲ್ಲಿ ಜೋರಾಗಿ ಮಳೆ ಸುರಿಯಲಿದೆ. ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

ಬೆಂಗಳೂರು ಸೇರಿದಂತೆ ಒಳನಾಡು ಭಾಗಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆಯಿದ್ದು ಮೈಸೂರು, ರಾಮನಗರ, ಮಂಡ್ಯ ಮೊದಲಾದ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
