ಉಡುಪಿ: ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಶ್ರೀಶ್ರೀ ಸುಗುಣೇಂದ್ರತೀರ್ಥಶ್ರೀಪಾದರ ಜಾಗತಿಕ ಧಾರ್ಮಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞದ ಹೊತ್ತಿಗೆ ಗಳನ್ನು ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ನೀಡಲಾಯಿತು. ಸಂಕರ್ಷಣ ಪ್ರಖಂಡದ ಗೀತಾ ಸ್ವಯಂಸೇವಕರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರು ಮೇ 3 ರಂದು ಗಣ್ಯರ ಸಮ್ಮುಖದಲ್ಲಿ ಯಜ್ಞ ಮಾಹಿತಿ ನೀಡಿ ಹೊತ್ತಗೆ ಹಸ್ತಾಂತರ ಮಾಡಿದರು.

ಈಗಾಗಲೇ ಪೂಜ್ಯ ಶ್ರೀಪಾದರಿಂದ ಯಜ್ಞ ದೀಕ್ಷೆ ಸ್ವೀಕರಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು , ಸಚಿವ ಸುನೀಲ್ ಕುಮಾರ್, ಶಾಸಕರಾದ
ಉಮಾನಾಥ ಕೋಟ್ಯಾನ್ , ರಾಜೇಶ್ ನಾಯಕ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಪುತ್ತೂರಿನ ಆಶಾ ತಿಮ್ಮಪ್ಪ ಗೌಡ, ಉಡುಪಿಯ ಯಶ್ಪಾಲ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.