ಮಂಗಳೂರು: ಚುನಾವಣೆಯ ಒತ್ತಡದ ನಡುವೆಯೂ ರಕ್ತದಾನ ಮಾಡಿ ಮಾದರಿಯಾಗಿದ್ದಾರೆ ಮಂಗಳೂರಿನ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್.
ಮಂಗಳೂರಿನ ಆಸ್ಪತ್ರೆಗಳಲ್ಲಿ ತೀವ್ರ ರಕ್ತದ ಅಭಾವ ತಲೆದೋರಿದ್ದು ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಕಂಡುಬಂದಿದೆ.

ಇದರಿಂದ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಸಮರ್ಪಕವಾಗಿ ರಕ್ತದ ಪೂರೈಕೆಯಾಗುತ್ತಿಲ್ಲ. ಅನಿವಾರ್ಯವಾಗಿ ಆಸ್ಪತ್ರೆಯ ಆಡಳಿತ ಮಂಡಳಿಯವರು ಜನಪ್ರತಿನಿಧಿಗಳು, ಸೇವಾ ಸಂಸ್ಥೆಗಳು, ರಕ್ತದಾನಿಗಳ ಮೊರೆ ಹೋಗಿದ್ದಾರೆ. ವಿಷಯ ತಿಳಿದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಸ್ವಯಂಪ್ರೇರಿತರಾಗಿ ವೆನ್ಲಾಕ್ ಆಸ್ಪತ್ರೆಗೆ ಧಾವಿಸಿ ರಕ್ತದಾನ ಮಾಡಿದ್ದಲ್ಲದೇ ತಮ್ಮ ಕಾರ್ಯಕರ್ತರಿಗೂ ರಕ್ತದಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ .ಮುಂದಿನ ದಿನಗಳಲ್ಲಿ ಆಸ್ಪತ್ರೆಗಳಿಗೆ 500 ಯುನಿಟ್ ರಕ್ತ ಸಂಗ್ರಹ ಮಾಡುವುದಾಗಿ ವೇದವ್ಯಾಸ ಕಾಮತ್ ಅವರು ತಿಳಿಸಿದರು.
