MOODBIDRI :ಒತ್ತಡಮುಕ್ತ ಕಲಿಕೆಯಿಂದ ಯಶಸ್ಸು

ಮೂಡುಬಿದಿರೆ: ಒತ್ತಡಮುಕ್ತ ಕಲಿಕೆಯಿಂದ ಯಶಸ್ಸು ಸಾಧ್ಯ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್ ಹೇಳಿದರು. ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಸಂಸ್ಥೆಗಳ 21ನೇಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಮಾತೆರೆಗ್ಲಾ ಎನ್ನ ನಮಸ್ಕಾರ’ ಎಂದು ಮಾತು ಆರಂಭಿಸಿದ ಅವರು, ಪದವಿಯು ನಿಮ್ಮ ಜೀವನದ ಸಾಧನೆಗಳ ಆರಂಭ. ಆ್ಯಪಲ್ ಸಂಸ್ಥಾಪಕ ಸ್ಟೀವ್ ಜಾಬ್ಸ್ ಹೇಳಿದಂತೆ, ‘ ನಿಮ್ಮ ಸಮಯ ಅಲ್ಪ. ಅದನ್ನು ಇನ್ನೊಬ್ಬರ ಬದುಕಿನಲ್ಲಿ ಕಾಲಹರಣ ಮಾಡಲು ಕಳೆಯಬೇಡಿ. ಇತರರ ಅಭಿಪ್ರಾಯಗಳು ನಿಮ್ಮ ಅಂತಃಸಾಕ್ಷಿಯ ಧ್ವನಿಯನ್ನು ಮುಳುಗಿಸದಿರಲಿ. ನಿಮ್ಮ ಮನಃಸಾಕ್ಷಿಯಂತೆ ಮುನ್ನಡೆಯಿರಿ’ ಎಂದರು

ಎಕ್ಸಲೆಂಟ್‌ ವಿದ್ಯಾಸಂಸ್ಥೆ ಕಲ್ಲಬೆಟ್ಟು ಮೂಡುಬಿದಿರೆ- ಪ್ರವೇಶಾರಂಭ – ಜಾಹೀರಾತು

ನಿಮ್ಮ ಕನಸಿನೆಡೆಗೆ ಧೈರ್ಯದಿಂದ ಮುನ್ನಡೆಯಿರಿ. ನಿಮ್ಮ ಕಲ್ಪನೆಯ ಬದುಕು ಬದುಕಿ. ಸಾಧನೆಗೆ ತುಂಬಾ ಪರಿಶ್ರಮ ಬೇಕು. ಗುರಿ ಸಾಧಿಸಲು ತ್ಯಾಗ ಅನಿವಾರ್ಯ ಎಂದರು.
ಒತ್ತಡದ ಕಲಿಕೆಯೇ ಯಶಸ್ಸು ಎಂಬ ತಪ್ಪು ಗ್ರಹಿಕೆ ಹಲವು ವಿದ್ಯಾರ್ಥಿಗಳಲ್ಲಿದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಮೂರನೇ ಒಂದು ಭಾಗವನ್ನು ಒತ್ತಡದಲ್ಲಿ ಕಳೆಯುತ್ತಾರೆ. ಒತ್ತಡ ಕಲಿಕೆಯ ಭಾಗವಲ್ಲ. ಹೆಚ್ಚೆಚ್ಚು ಕಲಿತಾಗ ಬಳಲುತ್ತೇವೆ ಎಂಬ ತಪ್ಪು ಕಲ್ಪನೆ ಕೆಲವು ವಿದ್ಯಾರ್ಥಿಗಳಲ್ಲಿ ಇದೆ. ಆದರೆ, ಆ ಮೂಲಕ ನೀವು ನಿಮ್ಮ ಕಲಿಕೆಯ ಸಾಮರ್ಥ್ಯ ವನ್ನು ಕುಂಠಿತಗೊಳಿಸುತ್ತೀರಿ. ಒತ್ತಡದ ಬಳಲಿಕೆಯು ನಿಮ್ಮ ಗುರಿ ಸಾಧನೆ ವಿಫಲಗೊಳಿಸುತ್ತದೆ. ಕಡಿಮೆ ಒತ್ತಡದಲ್ಲೂ ಸಾಧನೆ ಮಾಡಬಹುದು ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 581, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 390 ಹಾಗೂ ಮಂಗಳೂರು ವಿಶ್ವವಿದ್ಯಾಲಯದ 1397 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 2368 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಅವರ ಪತ್ನಿ ಸಮೀರಾ ನಜೀರ್ ಇದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸ್ವಾಗತಿಸಿದರು. ಆಳ್ವಾಸ್ ಹೋಮಿಯೋಪಾಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ರೋಶನ್ ಪಿಂಟೋ ಪದವಿ ಘೋಷಣೆ ಮಾಡಿದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ರ್ಯಾಂಕ್ ವಿಜೇತರ ಹೆಸರು ವಾಚಿಸಿದರು. ಇಂಗ್ಲಿಷ್ ಪ್ರಾಧ್ಯಾಪಕ ರಾಜೇಶ್ ಡಿಸೋಜ ನಿರೂಪಿಸಿದರು.

Share

Leave a Reply

Your email address will not be published. Required fields are marked *