ಉಡುಪಿ: ತಿಂಗಳೆ ಪ್ರತಿಷ್ಠಾನ ವತಿಯಿಂದ ಜಿಲ್ಲೆಯ ಶಾಸಕರೊಂದಿಗೆ ಆಯೋಜಿಸಿದ್ದ ನನ್ನ ಕ್ಷೇತ್ರ – ನನ್ನ ಕನಸು ಒಂದು ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಉಡುಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ನವ ಉಡುಪಿ ನಿರ್ಮಾಣದ ಬಗ್ಗೆ ತಮ್ಮ ಕಲ್ಪನೆಯನ್ನು ಸಂವಾದದಲ್ಲಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣ್ಯರಾದ ಬಿ. ಅಪ್ಪಣ್ಣ ಹೆಗ್ಡೆ, ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಹಿರಿಯ ಪತ್ರಕರ್ತರಾದ ರಾಜ ಗುಡಿ ಹಾಗೂ ಮನೋಹರ ಪ್ರಸಾದ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.