ಮೂಡುಬಿದಿರೆ: ಇಂದಿನ ವಿದ್ಯಾರ್ಥಿಗಳಿಗೆ ಉತ್ತಮವಾದ ಸೌಲಭ್ಯಗಳು ಲಭ್ಯವಾಗುತ್ತಿವೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಪೂರಕ ವಾತಾವರಣ ಇಂದು ಲಭಿಸುತ್ತಿದೆ. ಸರಿಯಾದ ರೀತಿಯಲ್ಲಿ ಶಿಕ್ಷಣವನ್ನು ಪಡೆದು ಅವಕಾಶಗಳನ್ನು ಸದ್ ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಉಮಾನಾಥ ಎ ಕೋಟ್ಯಾನ್ ಹೇಳಿದರು.
ಮಿಜಾರಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭ ಶಾಲಾ ಮುಖ್ಯಸ್ಥರು, ಪೋಷಕರು, ವಿದ್ಯಾರ್ಥಿಗಳು, ಊರ ಗಣ್ಯರು ಹಾಜರಿದ್ದರು.
ಅಭಿನಂದನೆ: ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಉಮಾನಾಥ ಕೋಟ್ಯಾನ್ ಅವರನ್ನು ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು.