ಮೂಡುಬಿದಿರೆ: ಎಕ್ಸಲೆಂಟ್ ಮೂಡುಬಿದಿರೆ ಆಶ್ರಯದಲ್ಲಿ ನಡೆಸಲಾಗುತ್ತಿರುವ ನವೀಕರಣಗೊಂಡು ಸುಸಜ್ಜಿತವಾಗಿ ನಿರ್ಮಾಣವಾಗಿರುವ ಎಂ.ಕೆ.ಶೆಟ್ಟಿ, ಸೆಂಟ್ರಲ್ ಸ್ಕೂಲ್ ಕಲ್ಲಬೆಟ್ಟು ಇಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಪುರಸಭಾ ಪರಿಸರ ಅಭಿಯಂತರೆ ಶಿಲ್ಪಾ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು.
ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಮಾಜಿ ಉಪಾಧ್ಯಕ್ಷೆ ಸುಜಾತ ಶಶಿಧರ್ ಮತ್ತು ಎಕ್ಸಲೆಂಟ್ ಸಮೂಹ ಸಂಸ್ಥೆಯ ಅಧ್ಯಕ್ಷ ಗಿಡಗಳನ್ನು ನೆಟ್ಟರು.

ಕಾರ್ಯದರ್ಶಿ ರಶ್ಮಿತಾ ಜೈನ್, ಶೈಕ್ಷಣಿಕ ಸಲಹೆಗಾರರಾದ ಪುಷ್ಪರಾಜ್ ಅಡಳಿತ ನಿರ್ದೇಶಕ ಡಾ.ಬಿ.ಪಿ. ಸಂಪತ್ ಕುಮಾರ, ಪ್ರಾಂಶುಪಾಲ ವಿದ್ಯ ಬಾಳಿಗ ನಾಯಕ್ ಉಪ ಪ್ರಾಂಶುಪಾಲ ವಿಮಲ ಹಾಗೂ ಬೋಧಕ ಮತ್ತು ಭೋದಕೇತರ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.