ಮೂಡಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಗುರುಪೂರ್ಣಿಮೆಯನ್ನುಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಏಳಿಗೆಯಲ್ಲಿ ಸದಾ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಗುರುಗಳಾದ ಡಾ. ಸಂಪತ್‌ಕುಮಾರ್ ಹಾಗೂ ಪುಷ್ಪರಾಜ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂಪತ್‌ಕುಮಾರ್ ಮಾತನಾಡಿ ಜ್ಞಾನದಿಂದ ದೇಶದ ಭವಿಷ್ಯರೂಪಿಸಬಹುದು. ಅಂತಹಃ ಜ್ಞಾನ ನೀಡುತ್ತಿರುವ ಎಲ್ಲಾ ಗುರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್‌ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಶಿಕ್ಷಕರು ಉಪಸ್ಥಿತರಿದ್ದರು.