ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ಮೂಡುಬಿದಿರೆ (ರಿ.) ಇದರ 60ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮೂಡುಬಿದಿರೆ ಜೈನಮಠದಲ್ಲಿ ಅನಾವರಣಗೊಳಿಸಲಾಯಿತು.
ಶ್ರೀ ಜೈನಮಠದಲ್ಲಿ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಬಿಡುಗಡೆ ಮಾಡಿದರು. ಸಮಿತಿ ಅಧ್ಯಕ್ಷ ಕೆ.ಶ್ರೀಪತಿ ಭಟ್, ಉಪಾಧ್ಯಕ್ಷ ಸುಕುಮಾರ್, ಪ್ರಧಾನ ಕಾರ್ಯದರ್ಶಿ ನಾರಾಯಣ ಪಿಎಂ.,ಸಂಚಾಲಕ ರಾಜಾರಾಮ ನಾಗರಕಟ್ಟೆ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.