ಪಡಿತರ ಚೀಟಿ ತಿದ್ದುಪಡಿಗೆ ಅವಧಿ ವಿಸ್ತರಿಸುವಂತೆ ಜವನೆರ್ ಬೆದ್ರ ಆಗ್ರಹ
ಮೂಡುಬಿದಿರೆ: ರಾಜ್ಯ ಸರಕಾರವು ಪಡಿತರ ಚೀಟಿ ತಿದ್ದುಪಡಿಗೆ ನಿಗಧಿ ಪಡಿಸಿದ ದಿನಾಂಕಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಎರಡು ದಿನಗಳಲ್ಲಿ ಯಾವುದೇ ತಿದ್ದುಪಡಿ ಸಾಧ್ಯವಾಗಲಿಲ್ಲ. ಈ ಸಮಸ್ಯೆಯಿಂದಾಗಿ ಅನೇಕ ಮಂದಿ ಪಡಿತರ ಚೀಟಿ ತಿದ್ದುಪಡಿ ಮಾಡಲು ಅಸಾಧ್ಯವಾಗಿದೆ. ಜಿಲ್ಲಾಧಿಕಾರಿಗಳು, ಆಹಾರ ಇಲಾಖೆಯ ಅಧಿಕಾರಿಗಳು ಈ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ ನೀಡಬೇಕು ಹಾಗೂ ತಿದ್ದು ಪಡಿ ಅವಧಿಯನ್ನು ವಿಸ್ತರಿಸಬೇಕೆಂದು ಮೂಡುಬಿದಿರೆಯ ಜವನೆರ್ ಬೆದ್ರ ಯುವ ಸಂಘಟನೆ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಇದು ಮೂಡುಬಿದಿರೆಗಷ್ಟೇ ಸೀಮಿತವಾಗಿಲ್ಲ. ಇಡೀ ರಾಜ್ಯದಾದ್ಯಂತ ಈ ಸಮಸ್ಯೆ ಇರುವುದರಿಂದಾಗಿ ತಿದ್ದುಪಡಿ ವ್ಯವಸ್ಥೆಯನ್ನು ಖಾಯಂ ಆಗಿ ಚಾಲ್ತಿಯಲ್ಲಿರುವಂತೆ ಸರಕಾರ ಕ್ರಮ ವಹಿಸಬೇಕೆಂದು ಒತ್ತಾಯಿಸಿದೆ.
ಜವನೆರ್ ಬೆದ್ರ ಸಂಸ್ಥಾಪಕ ಅಮರ್ ಕೋಟೆ ನೇತೃತ್ವದ ನಿಯೋಗ ಬುಧವಾರ ಮನವಿ ಸಲ್ಲಿಸಿತು.ನಿಯೋಗದಲ್ಲಿ ಸಂಚಾಲಕ ನಾರಾಯಣ ಪಡುಮಲೆ, ಸದಸ್ಯರಾದ ಸಂಪತ್ ಪೂಜಾರಿ ನೆತ್ತೋಡಿ, ರಂಜಿತ್ ಶೆಟ್ಟಿ, ಅಖಿಲೇಶ್, ಸಾಕ್ಷತ್ ಇದ್ದರು.