ಬೆಂಗಳೂರು: ಸಿದ್ದರಾಮಯ್ಯ ಸರಕಾರದ ಗೂಂಟಾಗಿರಿ ಸಚಿವರ ಪಟ್ಟಿಯನ್ನು ಬಿಜೆಪಿ ರಿಲೀಸ್ ಮಾಡಿದೆ. ಬಿಜೆಪಿ ನೀಡಿರುವ ಪಟ್ಟಿಯಲ್ಲಿ ಸಚಿವರಾದ ಡಿ ಕೆ ಶಿವಕುಮಾರ್, ಡಿ ಸುಧಾಕರ್, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್, ಚಲುವರಾಯಸ್ವಾಮಿ ಮುಂತಾವರ ಹೆಸರು ಇದೆ. ಅವರು ಮಾಡಿರುವ ಅಪರಾಧಗಳೇನು ಎಂಬುದನ್ನು ಬಿಜೆಪಿ ಟ್ವೀಟ್‌ನಲ್ಲಿ ವಿವರಿಸಿದೆ.. `ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತುಘಲಕ್ ದರ್ಬಾರಿನ ಸಚಿವ ಸಂಪುಟದಲ್ಲಿ ಗೂಂಡಾಗಿರಿ ಸಚಿವರ ಪಟ್ಟಿ’ ಎಂದು ಪಟ್ಟಿಯೊಂದನ್ನು ಟ್ವೀಟ್ ಮಾಡಿದೆ. ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ ಸುಧಾಕರ್ ಮೇಲೆ ಹಲ್ಲೆ, ದೌರ್ಜನ್ಯ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ಒತ್ತಾಯಿಸಿವೆ. ಕರ್ನಾಟಕ ಬಿಜೆಪಿ ಬುಧವಾರ ಇದೇ ವಿಚಾರ ಮುಂದಿಟ್ಟುಕೊ0ಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದೆ