ಮಂಗಳೂರು/ಕಾಸರಗೋಡು ವರದಿ
ಕೇರಳ ರಾಜ್ಯದಲ್ಲಿ ನಿಫಾ ವೈರಸಿನಿಂದ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೂಕ್ತ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಆರೋಗ್ಯಾಧಿಕಾರಿ ಡಾ ಸುದರ್ಶನ್ ತಿಳಿಸಿದ್ದಾರೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಜ್ವರ ಸಮೀಕ್ಷೆ ಬಲಪಡಿಸಲು ಸೂಚನೆ ನೀಡಿದ್ದಾರೆ. ರೋಗಲಕ್ಷಣಗಳು ಕಂಡು ಬಂದಲ್ಲಿ ಅವರಿಗೆ ಚಿಕಿತ್ಸೆ ನೀಡಲು ಎಲ್ಲಾ ಕ್ರಮ ವಹಿಸಲಾಗಿದೆ. ಐಸೋಲೇಶನ್ ವಾರ್ಡುಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಮುಂಜಾಗ್ರತೆ ಪಾಲಿಸುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ತುರ್ತು ಸಭೆ ನಡೆಸಿದ ಜಿಲ್ಲಾ ಆರೋಗ್ಯಾಧಿಕಾರಿಗಳು, ಮುಂಜಾಗರೋಕತೆ ಪಾಲಿಸುವಂತೆ ಸೂಚಿಸಿದ್ದಾರೆ.