ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಫ್ಯಾಕ್ಟ್ ಚೆಕ್ ಮಾಡುವಂತೆ ಬಿಜೆಪಿ ಮುಖಂಡ ಸಿ ಟಿ ರವಿ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಯಾವ ಆಧಾರದ ಮೇಲೆ ಈ ಹೇಳಿಕೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಯಾವ ರಾಜರೂ ಮನುಸ್ಮೃತಿಯನ್ನು ಸಂವಿಧಾನವಾಗಿ ಮಾಡಿಲ್ಲ. ಸದ್ಯ ಯಾವ ರಾಜ್ಯವೂ ಮನುಸ್ಮೃತಿಯನ್ನು ಆಡಳಿತದ ಭಾಗ ಮಾಡುತ್ತೇವೆ ಎಂದು ಹೇಳಿಲ್ಲ ಹೀಗಿರುವಾಗ ಸಿದ್ದರಾಮಯ್ಯ ಅವರ ಹೇಳಿಕೆಗೆ ಏನು ಆಧಾರವಿದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.